"ನಮ್ಮ ಭೂಮಿ ಸಂತೋಷವಾಗಿರಬೇಕಾದರೆ, ಸ್ವಚ್ಛತೆಯನ್ನು ಕಾಪಾಡಬೇಕಾಗಿದೆ. ಈ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರ ಅಪಾರವಾದ ಶ್ರಮವಿದೆ. ಇಂದು ತ್ಯಾಜ್ಯ ಎನ್ನುವುದು ಸಮಸ್ಯೆಯಾಗಿ ಉಳಿದಿಲ್ಲ. ಇದು ಲಾಭದಾಯಕ ಉದ್ದಿಮೆಯಾಗಿದೆ. ನಮ್ಮ ಮನೆಯ ಕಸವನ್ನು ನಾವು ಸರಿಯಾಗಿ ನಿರ್ವಹಣೆ ಮಾಡುವುದೇ ನಾವು ಪೌರಕಾರ್ಮಿಕರಿಗೆ ನೀಡುವ ನಿಜವಾದ ಸನ್ಮಾನ," ಎಂದು ಎಂದು ಉಜಿರೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಅಭಿಪ್ರಾಯಪಟ್ಟರು.